ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು ಮೇ ತಿಂಗಳಲ್ಲಿ ನಡೆಸಬಾರದು ಎಂದು ಹೇಳಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೋವಿಡ್ ಮಾರ್ಗಸೂಚಿಗಳನ್ನು ಗಮನಿಸಿ ಜೂನ್ ನಲ್ಲಿ ಆನ್ಲೈನ್ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಯುಜಿಸಿಯಿಂದ ಸೂಚನೆ ನೀಡಲಾಗಿದೆ.
ಪರೀಕ್ಷೆ ನಡೆದಲ್ಲಿ ವಿದ್ಯಾರ್ಥಿಗಳು ಗುಂಪುಗೂಡುವ ಸಾಧ್ಯತೆ ಇದ್ದು, ಇದರಿಂದ ಸೋಂಕು ಮತ್ತಷ್ಟು ಉಲ್ಬಣವಾಗುತ್ತದೆ. ಈ ಕಾರಣದಿಂದ ಉನ್ನತ ಶಿಕ್ಷಣ ಇಲಾಖೆಯ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ಪರಿಸ್ಥಿತಿ ಸುಧಾರಿಸಿದ ನಂತರ ಮಾರ್ಗಸೂಚಿ ಆಧರಿಸಿ ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.