ನವದೆಹಲಿ: ನವೆಂಬರ್ 17 ರಿಂದ ವಿಶ್ವವಿದ್ಯಾಲಯ, ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ವಿಶ್ವವಿದ್ಯಾಲಯಗಳು, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಾಲೇಜು, ವಿ.ವಿ. ಆವರಣದಲ್ಲಿ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಸಿಬ್ಬಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
ತರಗತಿಗಳಲ್ಲಿಯೂ ವಿದ್ಯಾರ್ಥಿಗಳು ಮಾಸ್ಕ್ ಬಳಸಬೇಕು. ಹ್ಯಾಂಡ್ ವಾಶ್, ಸ್ಯಾನಿಟೈಸರ್ ಬಳಕೆಗೆ ವ್ಯವಸ್ಥೆ ಇರಬೇಕು. ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವುದು ಅಗತ್ಯವಾಗಿದೆ. ಅನಾರೋಗ್ಯ ಲಕ್ಷಣಗಳು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸೇತು ಆಪ್ ಬಳಕೆಗೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದು ವಿವಿ ಮತ್ತು ಕಾಲೇಜು ಪುನಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ
ಇದರೊಂದಿಗೆ ಅಗತ್ಯವಿದ್ದರೆ ಮಾತ್ರ ಹಾಸ್ಟೆಲ್ ಓಪನ್ ಮಾಡಬೇಕು. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ 14 ದಿನ ಕ್ವಾರಂಟೈನ್ ನಲ್ಲಿರಲು ಸೂಚಿಸಬೇಕು. ಶುಚಿತ್ವ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಕಾಲೇಜು ವಿಶ್ವವಿದ್ಯಾಲಯ ಆವರಣಗಳು ಸ್ವಚ್ಛವಾಗಿರಬೇಕು. ವಾಹನಗಳು, ಕಾಲೇಜ್ ಬಸ್ ಸ್ಯಾನಿಟೈಸ್ ಮಾಡುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.