ಯುಐಡಿಎಐ ನಿಮ್ಮ ಆಧಾರ್ ಅನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ನವೀಕರಿಸಲು ನಿಮ್ಮ ದಾಖಲೆಗಳನ್ನು ಹಂಚಿಕೊಳ್ಳಲು ಎಂದಿಗೂ ಕೇಳುವುದಿಲ್ಲ. #myAadhaarPortal ಮೂಲಕ ಆನ್‌ಲೈನ್‌ನಲ್ಲಿ ನಿಮ್ಮ ಆಧಾರ್ ಅನ್ನು ನವೀಕರಿಸಿ ಅಥವಾ ನಿಮ್ಮ ಸಮೀಪದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದು.
ಕಳೆದ ವರ್ಷದ ಆರಂಭದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಜನರು ತಮ್ಮ ಆಧಾರ್ ಕಾರ್ಡ್‌ಗಳ ಫೋಟೊಕಾಪಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳದಂತೆ ಸಲಹೆ ನೀಡಿತ್ತು. ಏಕೆಂದರೆ ಆಧಾರ್ ಕಾರ್ಡ್ ದುರ್ಬಳಕೆಯಾಗಬಹುದಾದ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿದೆ.
ಆಧಾರ್ ಕಾರ್ಡ್ ಅನ್ನು ಗುರುತನ್ನು ಸಾಬೀತುಪಡಿಸಲು ಮತ್ತು ವಹಿವಾಟುಗಳನ್ನು ಮಾಡಲು ಮುಕ್ತವಾಗಿ ಬಳಸಬೇಕು. ಆದರೆ ಟ್ವಿಟರ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಬಾರದು ಎಂದು ಯುಐಡಿಎಐ ತನ್ನ ವೆಬ್‌ಸೈಟ್‌ನಲ್ಲಿ ಸುರಕ್ಷತಾ ಸೂಚನೆಯನ್ನು ಜನರಿಗೆ ತಿಳಿಸಿದೆ.
ಇನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 10 ವರ್ಷಗಳ ಹಿಂದೆ ತಮ್ಮ ಆಧಾರ್ ಕಾರ್ಡ್‌ಗಳನ್ನು ಸ್ವೀಕರಿಸಿದ ಮತ್ತು ತಮ್ಮ ವಿವರಗಳನ್ನು ನವೀಕರಿಸದ ಜನರಿಗೆ ಸಾಧ್ಯವಾದಷ್ಟು ಬೇಗ ನವೀಕರಿಸಲು ಸಲಹೆ ನೀಡಿದೆ. ನವೀಕರಿಸಿದ ಆಧಾರ್ ಕಾರ್ಡ್ ಸರ್ಕಾರಿ ಸೇವೆಗಳನ್ನು ಪ್ರವೇಶಿಸಲು, ಬ್ಯಾಂಕ್ ಖಾತೆಗಳನ್ನು ತೆರೆಯಲು ಮುಂತಾದವುಗಳಿಗೆ ಸಹಾಯ ಮಾಡುತ್ತದೆ ಎಂದು ಯುಐಡಿಎಐ ಹೇಳಿದೆ.