alex Certify BREAKING NEWS : ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಯನ್ನು ದೋಷಮುಕ್ತ ಎಂದ ‘CBI’ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಯನ್ನು ದೋಷಮುಕ್ತ ಎಂದ ‘CBI’ ಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿದೆ.

ಸಾಕ್ಷಾಧಾರಗಳ ಕೊರತೆ ಹಿನ್ನೆಲೆ ಆರೋಪಿ ಸಂತೋಷ್ ರಾವ್ ನನ್ನು ನಿರ್ದೋಷಿ ಎಂದು ಬೆಂಗಳೂರಿನ ಸಿಬಿಐ ಕೋರ್ಟ್ ನ್ಯಾಯಮೂರ್ತಿ ಸಿಬಿ ಸಂತೋಷ್ ಆದೇಶ ಹೊರಡಿಸಿದ್ದಾರೆ.

ಉಜಿರೆಯ  ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ  2012  ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ನಂತರ ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಅನುಮಾನದ ಮೇರೆಗೆ ಸಮೀಪದ ಮನೆಯಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿದೆ..

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...