
ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಹಾಗೂ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ಭಾನುವಾರದಂದು ಮಧ್ಯಪ್ರದೇಶದ ಉಜ್ಜಯನಿಯ ಬಾಬಾ ಮಹಾಕಾಲ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಹಳದಿ ಬಣ್ಣದ ವಸ್ತ್ರ ಧರಿಸಿದ್ದ ದಂಪತಿ, ಮಹಾಕಾಲ್ ಜ್ಯೋತಿರ್ಲಿಂಗಕ್ಕೆ ಜಲಾರ್ಪಣೆ ಮಾಡಿ ಬಳಿಕ ಭಸ್ಮಾರತಿಯಲ್ಲೂ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ದೇಗುಲಕ್ಕೆ ಬಂದಿದ್ದ ಭಕ್ತರು ನೆಚ್ಚಿನ ಆಟಗಾರನ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಕೆ.ಎಲ್. ರಾಹುಲ್ ಹಾಗೂ ಆಥಿಯಾ ಶೆಟ್ಟಿ ಈ ವರ್ಷದ ಜನವರಿ 23 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸುನಿಲ್ ಶೆಟ್ಟಿ ಅವರ ಖಂಡಾಲ ಫಾರ್ಮ್ ಹೌಸ್ ನಲ್ಲಿ ಈ ಅದ್ದೂರಿ ವಿವಾಹ ನೆರವೇರಿತ್ತು. ಈ ಸಮಾರಂಭದಲ್ಲಿ ಬಾಲಿವುಡ್ ನಟರೂ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದರು.
