ಲಂಡನ್: ಹೊಸ ಕೋವಿಡ್ ರೂಪಾಂತರ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ 6 ವಾರಗಳ ಕಾಲ ಲಾಕ್ ಡೌನ್ ಘೋಷಿಸಿದ್ದಾರೆ.
ಫೆಬ್ರವರಿ ಮಧ್ಯದವರೆಗೆ ಹೊಸ ಲಾಕ್ಡೌನ್ ಜಾರಿ ಮಾಡಲಾಗಿದೆ. ಸೋಮವಾರ ರಾತ್ರಿ ಡೌನಿಂಗ್ ಸ್ಟ್ರೀಟ್ ನಿಂದ ದೂರದರ್ಶನ ಭಾಷಣದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬೋರಿಸ್ ಜಾನ್ಸನ್ ಅವರು, ರೂಪಾಂತರ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರು ವಾರ ಲಾಕ್ಡೌನ್ ಜಾರಿ ಮಾಡುವುದಾಗಿ ಘೋಷಿಸಿದ್ದಾರೆ.
ಶಾಲೆ ಮತ್ತು ವಾಣಿಜ್ಯ ವ್ಯವಹಾರ ಚಟುವಟಿಕೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ ಎಂದು ಅವರು ದೃಢಪಡಿಸಿದ್ದಾರೆ. 2020 ರ ಮಾರ್ಚ್ ನಲ್ಲಿ ಮೊದಲ ಬಾರಿಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಈಗ ಮತ್ತೊಮ್ಮೆ ರೂಪಾಂತರ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಹೀಗಾಗಿ ಲಾಕ್ಡೌನ್ ಜಾರಿಮಾಡಲಾಗಿದೆ. ವ್ಯಾಕ್ಸಿನೇಷನ್ ಕಾರ್ಯಕ್ರಮ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.