ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮೂರು ವರ್ಷಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದ್ದ ಬೋರಿಸ್ ಜಾನ್ಸನ್ ಇದೀಗ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಬ್ರಿಟನ್ ನಲ್ಲಿ ಕಳೆದ 48ಗಂಟೆಗಳಲ್ಲಿ 5 ಕ್ಯಾಬಿನೆಟ್ ಸಚಿವರು ಸೇರಿದಂತೆ 40ಕ್ಕೂ ಹೆಚ್ಚು ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದಂತೆ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೋರಿಸ್ ಜಾನ್ಸನ್, ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ನೋವಾಗುತ್ತಿದೆ. ದೇಶವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲು ಸಾಕಷ್ಟು ಶ್ರಮಿಸಿದ್ದೇನೆ. ಎಲ್ಲಾ ಸಹೊದ್ಯೋಗಿಗಳಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.