ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲಿಯೇ ಶಿಕ್ಷಣ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಲು ಪ್ರಯತ್ನ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್, ಪದವಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲು ತೊಂದರೆ ಇಲ್ಲ. ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರೆಸಲು ಕೆಲವು ಮಿತಿಗಳು ಇದ್ದು, ಅವರ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿದೆ ಎಂದು ಹೇಳಿದ್ದಾರೆ.