alex Certify BIG SHOCKING: ಯುದ್ಧಪೀಡಿತ ಉಕ್ರೇನ್ ನಲ್ಲಿ ಒತ್ತೆಯಾಳಾದ ಭಾರತೀಯ ವಿದ್ಯಾರ್ಥಿಗಳು, ಗುರಾಣಿಯಂತೆ ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಯುದ್ಧಪೀಡಿತ ಉಕ್ರೇನ್ ನಲ್ಲಿ ಒತ್ತೆಯಾಳಾದ ಭಾರತೀಯ ವಿದ್ಯಾರ್ಥಿಗಳು, ಗುರಾಣಿಯಂತೆ ಬಳಕೆ

ಭಾರತೀಯರ ರಕ್ಷಣೆಗೆ ನಾವು ಬದ್ಧ. ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನೆರವಾಗುತ್ತೇವೆ ಎಂದು ಪ್ರಧಾನಿ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ ನೀಡಿದ್ದಾರೆ.

ಆದರೆ, ಉಕ್ರೇನ್ ಭಾರತೀಯರನ್ನು ಗುರಾಣಿಯಂತೆ ಬಳಸಿಕೊಳ್ಳುತ್ತಿದೆ. ರಷ್ಯಾ ದಾಳಿಯಿಂದಾಗಿ ಕಂಗೆಟ್ಟಿರುವ ಉಕ್ರೇನ್ ಭಾರತೀಯರು ಹೋಗಲು ಬಿಡುತ್ತಿಲ್ಲ. ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ರಷ್ಯಾ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿದ ಉಕ್ರೇನ್ ಭಾರತೀಯರನ್ನು ರಷ್ಯಾವೇ ಒತ್ತೆಯಾಳಾಗಿರಿಸಿಕೊಂಡಿದೆ ಎಂದು ಹೇಳಿದೆ.

ಭಾರತೀಯರನ್ನು ಸುರಕ್ಷಿತವಾಗಿ ಕಳುಹಿಸಿಕೊಡುತ್ತೇವೆ ಎಂದು ರಷ್ಯಾ ವಿದೇಶಾಂಗ ಇಲಾಖೆಯಿಂದ ಹೇಳಿಕೆಯಿಂದ ಬಿಡುಗಡೆ ಮಾಡಲಾಗಿದೆ. ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ. ಉಕ್ರೇನ್ ನವರು ಒತ್ತೆಯಾಳಾಗಿ ಇಟ್ಟುಕೊಂಡು ಭಾರತೀಯರನ್ನು ಗುರಾಣಿಯಂತೆ ಬಳಸಿಕೊಳ್ಳುತ್ತಿದ್ದಾರೆ. ಭಾರತೀಯರ ಸ್ಥಳಾಂತರ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ರಷ್ಯಾ ಸರ್ಕಾರದಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಯುದ್ಧ ಪೀಡಿತ ಉಕ್ರೇನ್‌ ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತ ತನ್ನ ಪ್ರಯತ್ನಗಳನ್ನು ಹೆಚ್ಚಿಸುತ್ತಿದ್ದಂತೆ, ರಷ್ಯಾ ಮತ್ತು ಉಕ್ರೇನ್‌ ದೇಶಗಳಿಗೆ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಕಳಿಸಲು ಮನವಿ ಮಾಡಿದೆ. ವಿದ್ಯಾರ್ಥಿಗಳ ಸ್ಥಳಾಂತರ ಪ್ರಕ್ರಿಯೆಯ ನಡುವೆ, ರಷ್ಯಾ ಮತ್ತು ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಪರಸ್ಪರ ಆರೋಪಿಸಿದ್ದಾರೆ.

ಖಾರ್ಕಿವ್‌ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್, ನಮ್ಮ ಮಾಹಿತಿಯ ಪ್ರಕಾರ, ಖಾರ್ಕಿವ್‌ನಲ್ಲಿ ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೆಲ್ಗೊರೊಡ್‌ಗೆ ಹೋಗಲು ಬಯಸುವ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಉಕ್ರೇನಿಯನ್ ಅಧಿಕಾರಿಗಳು ಬಲವಂತವಾಗಿ ಬಂಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ. ಅವರನ್ನು ತಮ್ಮ ಮಿಲಿಟರಿ ಸಾರಿಗೆ ವಿಮಾನಗಳು ಅಥವಾ ಭಾರತೀಯ ವಿಮಾನಗಳೊಂದಿಗೆ ರಷ್ಯಾದ ಪ್ರದೇಶದಿಂದ ಮನೆಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳು ರಷ್ಯಾದ ಸಶಸ್ತ್ರ ಆಕ್ರಮಣದ ಒತ್ತೆಯಾಳುಗಳಾಗಿದ್ದಾರೆ ಎಂದು ಉಕ್ರೇನ್ MFA ಆರೋಪಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...