alex Certify ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಿಲಾರು ನಿವಾಸಿ ಮೊಹಮ್ಮದ್ ಆರಿಫ್(27) ಬಂಧಿತ ಆರೋಪಿ. ಕುತ್ತಾರ್ ವಿಷ್ಣುಮೂರ್ತಿ ರಸ್ತೆಯ ಮೂಲಕ ಜಂಕ್ಷನ್ ಕಡೆಗೆ ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಈತ ಖಾಸಗಿ ಅಂಗ ತೋರಿಸಿ ಅಸಭ್ಯ ವರ್ತನೆ ತೋರಿದ್ದಾನೆ.

ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಆರೋಪಿ, ಮಾಸ್ಕ್ ಮತ್ತು ಟೋಪಿ ಧರಿಸಿದ್ದ. ಯುವತಿ ಎದುರಾದ ಸಂದರ್ಭದಲ್ಲಿ ಖಾಸಗಿ ಅಂಗ ತೋರಿಸಿದ್ದು, ಇದರಿಂದ ಬೆದರಿದ ಯುವತಿ ಸಮೀಪದ ಅಂಗಡಿಗೆ ಹೋಗಿ ಸಹಾಯ ಕೇಳಿದ್ದಾಳೆ. ಈ ವೇಳೆ ಸ್ಥಳೀಯರು ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಯುವತಿಯ ತಾಯಿ ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ನಡೆದ ಒಂದು ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಈ ಹಿಂದೆಯೂ ಹಲವು ಮಹಿಳೆಯರ ಎದುರು ಈ ರೀತಿ ವರ್ತಿಸಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...