ಬೆಳಗಾವಿ: ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
ಬಡ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಫೋರ್ಟಿಫೈಡ್ ರೈಸ್ ವಿತರಣೆ ಮಾಡಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಬಡಕುಟುಂಬಗಳಿಗೆ ಪ್ರಾಯೋಗಿಕವಾಗಿ ಫೋರ್ಟಿ ಫೈಡ್ ರೈಸ್ ವಿತರಿಸಲಾಗುತ್ತದೆ. ನಂತರ ರಾಜ್ಯಾದ್ಯಂತ ಸಾರವರ್ಧಿತ ಅಕ್ಕಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.