ಬೆಳಗಾವಿ: ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿಶಾಕ್ ನೀಡಿದ್ದಾರೆ. 5 ಎಕರೆಗಿಂತ ಹೆಚ್ಚಿನ ಜಮೀನು, ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ಹೇಳಿದ್ದಾರೆ.
ಏಪ್ರಿಲ್ ನಂತರ ಕಾರ್ಡುದಾರರ ಪರಿಶೀಲನೆ ನಡೆಯಲಿದೆ. ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದರೆ ಕಾರ್ಡ್ ರದ್ದುಪಡಿಸಿ ದಂಡ ವಿಧಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಕಾರ್ಡ್ ಹಿಂದಿರುಗಿಸಲು ಉಳ್ಳವರಿಗೆ ಸೂಚನೆ ನೀಡಲಾಗಿದೆ.
ಸರ್ಕಾರಿ ಅಧಿಕಾರಿಗಳು, ನೌಕರರು, ಅರೆ ಸರ್ಕಾರಿ ನೌಕರರು, 1.20 ಲಕ್ಷ ರೂಪಾಯಿ ಆದಾಯ ಹೊಂದಿದವರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ. ಕೆಲವರು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಅಂಥವರು ಹಿಂದಿರುಗಿಸುವಂತೆ ತಿಳಿಸಲಾಗಿದೆ. ಇಲ್ಲದಿದ್ದರೆ ಸರ್ಕಾರದಿಂದಲೇ ಸಮೀಕ್ಷೆ ನಡೆಸಿ ಕಾರ್ಡ್ ಹಿಂಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.