ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರ ಖಾತೆ ಹಂಚಿಕೆ ಮತ್ತು ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ.
ಸಂಪುಟಕ್ಕೆ ಸೇರ್ಪಡೆಯಾದ ಉಮೇಶ್ ಕತ್ತಿ ಅವರಿಗೆ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೀಡಲಾಗಿದ್ದು, ತಮಗೆ ನೀಡಿದ ಖಾತೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಖಾತೆ ಹಂಚಿಕೆ ಸಂಬಂಧ ದೊಡ್ಡಮಟ್ಟದ ಅಸಮಾಧಾನ ಇಲ್ಲ. ಸಚಿವನಾಗಿ ಆತ್ಮಸಾಕ್ಷಿಯಂತೆ ಸಂತೋಷವಾಗಿದ್ದು ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ದಾರರಿಗೆ ಅನುಕೂಲ ಕಲ್ಪಿಸುತ್ತೇನೆ. ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜೋಳ, ರಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.