ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಪಡಿತರ ಅಕ್ಕಿಯನ್ನು 5 ಕೆಜಿ ಯಿಂದ 10 ಕೆಜಿಗೆ ಏರಿಕೆ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು. ಮೇ ಮತ್ತು ಜೂನ್ ತಿಂಗಳಿಗೆ ಉಚಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ಎರಡು ತಿಂಗಳು ತಲಾ 10 ಕೆಜಿ ಅಕ್ಕಿ ಜೊತೆಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ.
ಅದೇ ರೀತಿ ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಎರಡು ತಿಂಗಳು 35 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ 40 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಕೆಜಿಗೆ 15 ರೂಪಾಯಿ ದರದಲ್ಲಿ ಅಕ್ಕಿ ವಿತರಿಸಲಾಗುವುದು. ಆಹಾರ ಖಾತೆ ಸಚಿವ ಉಮೇಶ ಕತ್ತಿ ಈ ಬಗ್ಗೆ ಆದೇಶಿಸಿದ್ದಾರೆನ್ನಲಾಗಿದೆ.