ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಮುಕ ಉಮೇಶ್ ರೆಡ್ಡಿಗೆ ಹಿನ್ನಡೆಯಾಗಿದೆ. ಉಮೇಶ್ ರೆಡ್ಡಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್ ಗಲ್ಲು ಶಿಕ್ಷೆ ಖಾಯಂಗೊಳಿಸಿ ಆದೇಶ ಪ್ರಕಟಿಸಿದೆ. ನ್ಯಾ. ಪ್ರದೀಪ್ ಸಿಂಗ್ ಯೆರೂರ್ ನೇತೃತ್ವದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ.
ಬೆಂಗಳೂರಿನ ಜಯಶ್ರೀ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ಸೆಷನ್ ಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಇದಾದ ಬಳಿಕ ಕ್ಷಮಾದಾನ ಕೋರಿ ಉಮೇಶ್ ರೆಡ್ಡಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದನು.
2013ರಲ್ಲಿ ರಾಷ್ಟ್ರಪತಿ ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಾದ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸುವಂತೆ ಕೋರಿ ಉಮೇಶ್ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದ. ಇದೇ ವಿಚಾರವಾಗಿ ಇಂದು ಹೈಕೋರ್ಟ್ ತನ್ನ ನಿರ್ಧಾರ ಪ್ರಕಟಿಸಿದೆ.