alex Certify BREAKING: ಕಾಮುಕ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಮುಕ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ

ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಮುಕ ಉಮೇಶ್​ ರೆಡ್ಡಿಗೆ ಹಿನ್ನಡೆಯಾಗಿದೆ. ಉಮೇಶ್​ ರೆಡ್ಡಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್​ ಗಲ್ಲು ಶಿಕ್ಷೆ ಖಾಯಂಗೊಳಿಸಿ ಆದೇಶ ಪ್ರಕಟಿಸಿದೆ. ನ್ಯಾ. ಪ್ರದೀಪ್​ ಸಿಂಗ್​ ಯೆರೂರ್ ನೇತೃತ್ವದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಬೆಂಗಳೂರಿನ ಜಯಶ್ರೀ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ಸೆಷನ್​ ಕೋರ್ಟ್​ನ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಇದಾದ ಬಳಿಕ ಕ್ಷಮಾದಾನ ಕೋರಿ ಉಮೇಶ್​ ರೆಡ್ಡಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದನು.

2013ರಲ್ಲಿ ರಾಷ್ಟ್ರಪತಿ ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಾದ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸುವಂತೆ ಕೋರಿ ಉಮೇಶ್​ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದ. ಇದೇ ವಿಚಾರವಾಗಿ ಇಂದು ಹೈಕೋರ್ಟ್ ತನ್ನ ನಿರ್ಧಾರ ಪ್ರಕಟಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...