ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಪಾಕಿಸ್ತಾನ ಉಗ್ರನ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಉಗ್ರ ಎಂದು ಯು.ಎನ್.ಎಸ್.ಸಿ. ಘೋಷಿಸಿದೆ.
ಪಾಕಿಸ್ತಾನ ಮೂಲದ ಉಗ್ರಗಾಮಿ, ಆಲ್ ಖೈದಾ ಸಂಘಟನೆಯ ಪ್ರಮುಖ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ(ಯುಎನ್‌ಎಸ್‌ಸಿ) ಸೋಮವಾರ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಮತ್ತು ಲಷ್ಕರ್-ಎ-ತೈಬಾ (ಎಲ್‌ಇಟಿ) ಮುಖ್ಯಸ್ಥ ಹಫೀಜ್ ಸಯೀದ್‌ನ ಸೋದರ ಮಾವ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ.
ಅಬ್ದುಲ್ ರೆಹಮಾನ್ ಮಕ್ಕಿ ಯಾರು?
ಮಕ್ಕಿಯನ್ನು ಈಗಾಗಲೇ ಭಾರತ ಮತ್ತು ಯುಎಸ್ ತಮ್ಮ ದೇಶೀಯ ಕಾನೂನುಗಳ ಅಡಿಯಲ್ಲಿ ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ.
ಮಕ್ಕಿಯು ಭಾರತದಲ್ಲಿ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಯುವಕರನ್ನು ನೇಮಿಸಿಕೊಳ್ಳುವುದು ಮತ್ತು ದಾಳಿಗಳನ್ನು ಯೋಜಿಸುವುದು, ನಿಧಿ ಸಂಗ್ರಹಿಸುವುದು ಮತ್ತು ಆಮೂಲಾಗ್ರಗೊಳಿಸುವಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ.
ಮಕ್ಕಿ 26/11 ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ಸೋದರ ಮಾವ. US- ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ(FTO) LeT ಯಲ್ಲಿ ವಿವಿಧ ನಾಯಕತ್ವದ ಪಾತ್ರ ವಹಿಸಿದ್ದಾನೆ.
ಎಲ್‌ಇಟಿ ಕಾರ್ಯಾಚರಣೆಗಳಿಗೆ ನಿಧಿ ಸಂಗ್ರಹಿಸುವಲ್ಲಿಯೂ ಅವರು ಪಾತ್ರ ವಹಿಸಿದ್ದಾರೆ.
2020 ರಲ್ಲಿ, ಪಾಕಿಸ್ತಾನಿ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಮಕ್ಕಿಯನ್ನು ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಆರೋಪದಲ್ಲಿ ದೋಷಿ ಎಂದು ಘೋಷಿಸಿ ಜೈಲು ಶಿಕ್ಷೆ ವಿಧಿಸಿತು ಎಂದು US ಸ್ಟೇಟ್ ಡಿಪಾರ್ಟ್ಮೆಂಟ್ ತಿಳಿಸಿದೆ.