ಪ್ರಸ್ತುತ ವಿಶ್ವದಲ್ಲಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಕ್ಕಳ ಅಮಾಯಕತೆ, ಲೈಂಗಿಕ ವಿಷಯಗಳ ಕುರಿತು ಅರಿವಿಲ್ಲದಿರುವುದು ಈ ಕೃತ್ಯಗಳು ಹೆಚ್ಚಾಗಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಸಂಸ್ಥೆ ಮಹತ್ವದ ನಿರ್ಣಯ ಒಂದನ್ನು ಕೈಗೊಂಡಿದೆ.
ಪ್ರತಿ ವರ್ಷದ ನವೆಂಬರ್ 18ನ್ನು ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆ ತಡೆ ದಿನವನ್ನಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಇದಕ್ಕೆ 110 ದೇಶಗಳು ಬೆಂಬಲ ವ್ಯಕ್ತಪಡಿಸಿವೆ. ಸೋಮವಾರದಂದು ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘೋರ ಅಪರಾಧವಾಗಿದ್ದು, ಈ ಶೋಷಣೆಯನ್ನು ತಡೆಗಟ್ಟಬೇಕಿದೆ. ಹೀಗಾಗಿ ಪ್ರತಿ ವರ್ಷದ ನವೆಂಬರ್ 18ರಂದು ಈ ವಿಷಯದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಲಾಗಿದ್ದು, ಅಲ್ಲದೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕವೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ.