ಬೆಂಗಳೂರು : ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆಯನ್ನು ನಿಯಂತ್ರಿಸಲು ಪಾಲಿಕೆಯ ಎಲ್ಲ ವಲಯಗಳಲ್ಲೂ ತಲಾ ಒಂದು ಪ್ರಹರಿ ವಾಹನವನ್ನು ರಾತ್ರಿ ವೇಳೆ ಗಸ್ತು ತಿರುಗಲು ನಿಯೋಜಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಫ್ಲೆಕ್ಸ್, ಬ್ಯಾನರ್ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್ಐಆರ್ ದಾಖಲಿಸಲಾಗುತ್ತಿದೆ. ಆದರೂ, ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.