ಮಂಡ್ಯ: ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಮಂಡ್ಯ ಜಿಲ್ಲೆಯಲ್ಲಿ ಮಹತ್ವದ ನಿಯಮ ಜಾರಿಗೆ ತಂದಿದೆ.
ಟ್ಯೂಷನ್ ಕ್ಲಾಸಿಗೆ ಹೋದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಅಮಾನುಷ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಬೆನ್ನಲ್ಲೇ ಮಂಡ್ಯ ಡಿಡಿಪಿಐ ಜವರೇಗೌಡ ಟ್ಯೂಶನ್ ಕ್ಲಾಸ್ ಗಳಿಗೆ ಮಹತ್ವದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಇರುವ ಅಕ್ರಮ ಟ್ಯೂಷನ್ ಕ್ಲಾಸ್ ಗಳ ಪತ್ತೆಗೆ ಸುತ್ತೋಲೆ ಹೊರಡಿಸಲಾಗಿದ್ದು, ಅನಧಿಕೃತ ಟ್ಯೂಷನ್ ತರಗತಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನುಮತಿ ಇಲ್ಲದೇ ಟ್ಯೂಷನ್ ಕ್ಲಾಸ್ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.