ಬೆಂಗಳೂರು : ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ… pic.twitter.com/gytsWGC62R
— DIPR Karnataka (@KarnatakaVarthe) December 9, 2024