
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ರಾಜ್ಯದಲ್ಲಿ ಸುಧಾರಣೆಯನ್ನು ಜಾರಿಗೆ ತರಲು ಸಮಿತಿಯನ್ನು ರಚಿಸಲಾಗುವುದು. ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ‘ಅಕ್ರಮ’ ಕೋಟಾವನ್ನು ರದ್ದುಗೊಳಿಸುವುದಾಗಿ ಮತ್ತು ಒಬಿಸಿಗಳು, ದಲಿತರು ಮತ್ತು ಎಸ್ಟಿಗಳ ಕೋಟಾವನ್ನು ಹೆಚ್ಚಿಸುವುದಾಗಿ ಅವರು ಭರವಸೆ ನೀಡಿದ್ದಾರೆ.