ಬೆಂಗಳೂರು: ಮಾರ್ಚ್ 28 ರ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದ್ದು, ಹಿಜಾಬ್ ಧರಿಸಿಕೊಂಡು ಬಂದರೆ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು. ಖಾಸಗಿ, ಅನುದಾನರಹಿತ ಶಾಲೆಗಳಲ್ಲಿ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.