ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಫೆ.1ರಂದು ಇಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಪ್ರತಿಗಳನ್ನು ಮುದ್ರಣ ಮಾಡದೇ ಇರಲು ತೀರ್ಮಾನಿಸಲಾಗಿದೆ.
ಕಳೆದ ವರ್ಷ ಕೂಡ ಸಂಪೂರ್ಣ ಪೇಪರ್ ಲೆಸ್ ಬಜೆಟ್ ಮಂಡನೆ ಮಾಡಲಾಗಿತ್ತು. ಇದು ಭಾರತದ ಇತಿಹಾಸ ದಲ್ಲೇ ಮೊದಲ ಪೇಪರ್ ಲೆಸ್ ಬಜೆಟ್ ಎಂಬ ಹೆಗ್ಗಳಿಕೆ ಹೊಂದಿತ್ತು. ಇದೀಗ ವಿತ್ತ ಸಚಿವರು ಮತ್ತೆ ಪೇಪರ್ಲೆಸ್ ಬಜೆಟ್ ಮಂಡನೆ ಮಾಡಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡನೆ ಮಾಡಲಿದ್ದಾರೆ.
ನೂತನ ಸಂಸತ್ತಿನಲ್ಲಿ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನ ತಲುಪಿದ್ದಾರೆ. ಬಜೆಟ್‌ಗೆ ಮೋದಿ ಸಂಪುಟದ ಒಪ್ಪಿಗೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.