ನವದೆಹಲಿ: 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಮುಹೂರ ಫಿಕ್ಸ್ ಆಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಜ.31ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ ಎಂದರು.
ಜ.31ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಪ್ರಿಲ್ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್-2025-26ನ್ನು ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಳಿಕ ಸಂಸತ್ ಬಜೆಟ್ ಪ್ರಸ್ತಾವನೆಗ್ಳನ್ನು ಪರಿಶೀಲಿಸಲು ವಿರಾಮ ತೆಗೆದುಕೊಳ್ಳಲಾಗುವುದು. ವಿವಿಧ ಸಚಿವಾಲಯಗಳ ಅನುದಾನಗಳ ಬೇಡಿಕೆಗಳನ್ನು ಚರ್ಚಿಸಲು ಮತ್ತು ಬಜೆಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಾರ್ಚ್ 10ರಿಂದ ಮತ್ತೆ ಸಭೆ ಸೇರುತ್ತೇವೆ ಎಂದು ವಿವರಿಸಿದ್ದಾರೆ.