
ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ-ಕೋಲಾಹಲ ನಡೆಸಿದ ಘಟನೆ ನಡೆಯಿತು.
ಬಜೆಟ್ ಮಂಡನೆಗೆ ಸ್ಪೀಕರ್ ಅನುಮತಿ ನೀಡುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಗದ್ದಲ-ಗಲಾಟೆ ಆರಂಭಿಸಿದರು. ಬಜೆಟ್ ಮಂಡನೆಗೂ ಮುನ್ನ ಚರ್ಚೆಗೆ ಅವಕಾಶ ನೀಡುವಂತೆ ಕೇಳಿದರು. ಬಜೆಟ್ ಮಂಡನೆಗೂ ಮುನ್ನ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿ ಬಜೆಟ್ ಮಂಡನೆಗೆ ವಿತ್ತ ಸಚಿವರಿಗೆ ಸೂಚಿಸಿದರು.
ವಿಪಕ್ಷಗಳ ಗದ್ದಲ-ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಆರಂಭಿಸಿದರು.