ನವದೆಹಲಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಹಲವು ಮಹತ್ವದ ಯೋಜನೆಗಳನು ಘೋಷಿಸಿದ್ದಾರೆ.
ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಕಲ್ಪಿಸುವುದಾಗಿ ವಿತ್ತ ಸಚಿವರು ಘೋಷಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.