
ನವದೆಹಲಿ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ವೇಳೆ ಜಿಲ್ಲಾ ಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರುಗಳಿಗೆ ಅಲೆದಾಟ ನಡೆಸುವುದು ತಪ್ಪಲಿದೆ ಎಂದರು.
ಇನ್ನು 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಅಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.