ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮದ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಅದಕ್ಕೂ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಇಲಾಖೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಬಜೆಟ್ ಪ್ರತಿ ಪಡೆದರು. ಬಳಿಕ ಬಜೆಟ್ ಪ್ರತಿಯನ್ನು ಪ್ರದರ್ಶಿಸಿದರು.
ಹಣಕಾಸು ಸಚಿವಾಲಯದಿಂದ ನೇರವಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್ ಮಂಡನೆಗೆ ಅನುಮತಿ ಪಡೆದಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 6ನೇ ಬಜೆಟ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 12ನೇ ಬಜೆಟ್ ಇದಾಗಿದೆ.