ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ವೇಳೆ ರಾಷ್ಟ್ರಪತಿಗಳು ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಕೇಂದ್ರ ಬಜೆಟ್ ಮಂಡನೆಗೆ ಶುಭ ಕೋರಿದರು.
ಕೆಲವೇ ಸಮಯದಲ್ಲಿ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಜೆಟ್ ಮಂಡನೆಗೆ ಅನುಮೋದನೆ ಸಿಗಲಿದೆ.