ಮೈಸೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾವು ಮನವಿ ಮಾಡಿದ್ದ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಕರ್ನಾಟಕದ ಪಾಲಿಗೆ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ರಾಜ್ಯದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ. ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ ಎಂದು ಕಿಡಿಕಾರಿದರು.
ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಯಾವುದೇ ಯೀಜನೆಗಳನ್ನು ಘೋಷಿಸಿಲ್ಲ. ನಾವು ಬಹಳಷ್ಟು ಯೋಜನೆಗಳ ಬಗ್ಗೆ ನಿರೀಕ್ಷೆ ಹೊಂದಿದ್ದೆವು. ಆದರೆ ಇದು ನಿರಾಶಾದಾಯಕ, ಅಭಿವೃದ್ಧಿಗೆ ವಿರುದ್ಧವಾದ ಬಜೆಟ್ ಆಗಿದೆ ಎಂದರು.