alex Certify ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗೆ ಏರಿಸಿದ ಬಜೆಟ್; ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಇಲ್ಲ; ಕೇಂದ್ರ ಬಜೆಟ್ ಗೆ ಸಿಎಂ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗೆ ಏರಿಸಿದ ಬಜೆಟ್; ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಇಲ್ಲ; ಕೇಂದ್ರ ಬಜೆಟ್ ಗೆ ಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಮಧ್ಯಂತರ ಬಜೆಟ್ ಚುನಾವಣಾ ಬಜೆಟ್. ಇದು ವಿಕಸಿತ ಬಜೆಟ್ ಅಲ್ಲ, ವಿನಾಶಕಾರಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದೆ. ಸಾಲಕ್ಕಾಗಿ ಬಡ್ಡಿ ಪಾವತಿಸುವುದು 1. 91 ಕೋಟಿ ರೂ.ಗಳು. ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಕಿಡಿಕಾರಿದರು.

ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ. ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ ಎಂದರು.

47,65758 ಕೋಟಿ ರೂ.ಗಾತ್ರದ ಬಜೆಟ್. ಕಳೆದ ವರ್ಷದ ಬಜೆಟ್ ಗಾತ್ರ 45 3097 ಕೋಟಿ ಆಗಿತ್ತು. ಈ ಬಾರಿ 2,62671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ. ಬಜೆಟ್ ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ. ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ವಿಕಸಿತ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಬಜೆಟ್ ಎಂದರು.

ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ. ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಕೃಷಿಭಾಗ್ಯ ಕಾರ್ಯಕ್ರಮ ಈ ವರ್ಗದ ಜನರಿಗೆ ಕೊಟ್ಟೆವು. ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ.

ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ 30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ಯು ಹೆಚ್ಚಿಸಿದ್ದಾರೆ. ಬಡವರ,ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ.

2004 -14 ರವರೆಗೆ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79 % ಇತ್ತು. ಈಗ ಬಜೆಟ್ ಬೆಳವಣಿಗೆ 9.6 % ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19 % ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ 11.14 % ಇತ್ತು ಎನ್.ಡಿ.ಎ ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ ಎಂದು ವ್ಯಾಖ್ಯಾನಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15 ನೇ ಹಣಕಾಸು, ಫೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. 5300 ಕೋಟಿ, ಭದ್ರ ಮೇಲ್ದಂಡೆ ಯೋಜನೆಗೆ ಬಂದಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ. ದೇಶದ ಸಾರ್ವ ಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...