ರೈತರಿಗೆ ಖುಷಿ ಸುದ್ದಿ ಸಿಕ್ಕಿದೆ. ಕೊರೊನಾ ವೈರಸ್, ಲಾಕ್ ಡೌನ್ ಮಧ್ಯೆ ಬೆಳೆಗೆ ಬೆಲೆಯಿಲ್ಲದೆ ಕಂಗೆಟ್ಟಿದ್ದ ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಖಾರಿಫ್ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಎಳ್ಳಿನ ಕನಿಷ್ಠ ಬೆಂಬಲ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಎಳ್ಳಿನ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 452 ರೂಪಾಯಿ ನಿಗದಿಪಡಿಸಲಾಗಿದೆ. ತೊಗರಿ ಹಾಗೂ ಉದ್ದಿನ ಬೇಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 300 ರೂಪಾಯಿ ನಿಗದಿಪಡಿಸಲಾಗಿದೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಖಾರಿಫ್ ಬೆಳೆಗಳ ಮೇಲಿನ ಎಂಎಸ್‌ಪಿಯನ್ನು ಶೇಕಡಾ 50 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಕಳೆದ ಏಳು ವರ್ಷಗಳಿಂದ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಅವರ ಸಮಸ್ಯೆಗಳನ್ನು ಪರಿಹರಿಸಲು ಎಲ್ಲ ಸಮಯದಲ್ಲೂ ಸರ್ಕಾರ ಸಿದ್ಧವಿದೆ ಎಂದು ತೋಮರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಈ ನಿರ್ಧಾರದ ನಂತರ ಭತ್ತದ ಕನಿಷ್ಠ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕ್ವಿಂಟಲ್‌ಗೆ 72 ರೂಪಾಯಿಯಿಂದ 1940 ರೂಪಾಯಿಗೆ ಏರಿದೆ. ಕಳೆದ ವರ್ಷ ಈ ಮೊತ್ತ ಕ್ವಿಂಟಲ್‌ಗೆ 1868 ರೂಪಾಯಿಯಿತ್ತು.