ನವದೆಹಲಿ: ಇನ್ನು 5 ವರ್ಷಗಳ ಕಾಲ ರಾಷ್ಟ್ರೀಯ ಆರೋಗ್ಯ ಮಿಷನ್(NHM) ಯೋಜನೆ ಮುಂದುವರೆಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರು, ಕಳೆದ 10 ವರ್ಷಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಕಾರ್ಯಕ್ರಮಡಿ ತನ್ನ ಗುರಿಗಳನ್ನು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ. 2021, 2022 ರಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಈ ಕಾರ್ಯಕ್ರಮದೊಂದಿಗೆ ಕೈಜೋಡಿಸಿದ್ದರು. ಇದೇ ಕಾರ್ಯಕ್ರಮದಡಿಯಲ್ಲಿಯೇ ಕೋವಿಡ್ ಸಾಂಕ್ರಾಮಿಕ ನಿಭಾಯಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಸಾಧಿಸಿದ ಪ್ರಗತಿಯನ್ನು ಕೇಂದ್ರ ಸಚಿವ ಸಂಪುಟ ಪರಿಶೀಲಿಸಿದೆ. ಈ ಹಿಂದೆ ನಿರ್ಧರಿಸಿದಂತೆ ಇನ್ನೂ 5 ವರ್ಷಗಳ ಕಾಲ ಅದರ ಅನುಷ್ಠಾನವನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.
2021 ರಲ್ಲಿ ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ ಅನುಷ್ಠಾನವನ್ನು ಐದು ವರ್ಷಗಳ ಕಾಲ 2026 ರವರೆಗೆ ವಿಸ್ತರಿಸಿತ್ತು.