ನವದೆಹಲಿ: ಒಂದು ರ್ಯಾಂಕ್ ಒನ್ ಪೆನ್ಷನ್ ಯೋಜನೆ(One Rank One Pension Scheme) ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
25 ಲಕ್ಷಕ್ಕೂ ಹೆಚ್ಚು ಯೋಧರ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ. ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಜುಲೈ 01, 2019 ರಿಂದ ಜಾರಿಗೆ ಬರುವಂತೆ ಒಂದು ಶ್ರೇಣಿ ಒಂದು ಪಿಂಚಣಿ ಅಡಿಯಲ್ಲಿ ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಪಿಂಚಣಿ ಪರಿಷ್ಕರಣೆ ಕುರಿತು ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದಿಂದ 25.13 ಲಕ್ಷಕ್ಕೂ ಹೆಚ್ಚು ಯೋಧರು ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.