
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ರೂಪಾಂತರಿ ‘ಓಮಿಕ್ರೋನ್’ ಆತಂಕ ಮೂಡಿಸಿದ್ದು, ದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ.
ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಸೋಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ತೀವ್ರ ನಿಗಾ ವಹಿಸಬೇಕು. ಲಸಿಕೆ ಅಭಿಯಾನವನ್ನು ಇನ್ನೂ ತ್ವರಿತಗೊಳಿಸಬೇಕು ಎಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಬಗ್ಗೆ ಸೂಚನೆ ನೀಡಿದ್ದರು. ಪ್ರಧಾನಿ ಮೋದಿ ನೀಡಿದ ಸೂಚನೆ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಿನ್ನೆ ಮೋದಿಯವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದ್ದರು.