alex Certify BIG NEWS: ಬೀದರ್ ನ ಗುರುದ್ವಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದರ್ ನ ಗುರುದ್ವಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೀದರ್: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ ಬೇಟೆ ನಡೆಸಲಿದ್ದಾರೆ.

ಅಮಿತ್ ಶಾ ಇಂದು ಬೀದರ್ ಗೆ ಆಗಮಿಸಿದ್ದು, ಬೀದರ್ ನ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಐತಿಹಾಸಿಕ ನರಸಿಂಹ ಝರ್ನಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ಗಡಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ.

ಇಂದು ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮೂಲಕ ಲಿಂಗಾಯಿತ ಮತ ಸೆಳೆಯಲು ರಣತಂತ್ರ ಹೂಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...