
ನವದೆಹಲಿ: ಹಲಗೇವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ ನೋಟಿಫಿಕೇಷನ್ ಪ್ರಕಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಹೈಕೋರ್ಟ್ ಬಿ ರಿಪೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ, ರಾಜೇಶ್ ಬಿಂದಾಲ್ ಅವರ ಪೀಠದಿಂದ ವಿಚಾರಣೆ ನಡೆಸಲಾಗಿದೆ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.