alex Certify ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ.

ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿಯವರು ಖಾತೆ ಹಂಚಿಕೆ ಮಾಡಿದ್ದಾರೆ. ಕೃಷಿ ಖಾತೆ ಸಿಗುವ ನಿರೀಕ್ಷೆ ಇತ್ತು. ಮೋದಿಯವರು ದೇಶದ ಅಭಿವೃದ್ಧಿಗೆ ಪೂರಕವಾಗಿ ಖಾತೆ ನೀಡಿದ್ದಾರೆ. ಜೂನ್ 11ರಂದು ಸಂಜೆ 5 ಗಂಟೆಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ವಿಶ್ವಾಸವಿಟ್ಟು ಖಾತೆ ಹಂಚಿಕೆ ಮಾಡಿದ್ದು, ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...