alex Certify ಪೆಗಾಸಸ್‌ ಕುರಿತ ವರದಿಗೆ ‘ಸುಪಾರಿ ಮೀಡಿಯಾ’ ಎಂದು ಕರೆದ ಜನರಲ್ ವಿಕೆ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಗಾಸಸ್‌ ಕುರಿತ ವರದಿಗೆ ‘ಸುಪಾರಿ ಮೀಡಿಯಾ’ ಎಂದು ಕರೆದ ಜನರಲ್ ವಿಕೆ ಸಿಂಗ್

ಪೆಗಾಸಿಸ್ ಗೂಢಚರ್ಯೆ ವಿಷಯ ದಿನದಿನಕ್ಕೂ ಕಾವು ಪಡೆದುಕೊಳ್ಳುತ್ತಿದೆ. ಇಸ್ರೇಲ್‌ನೊಂದಿಗಿನ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು ಪೆಗಾಸಸ್ ಸ್ಪೈ ಟೂಲ್ ಖರೀದಿಸಿದೆ ಎಂದು ಹೇಳಿರುವ ವರದಿಯ ಕುರಿತು ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಪ್ರತಿಕ್ರಿಯೆ ನೀಡಿ ನ್ಯೂಯಾರ್ಕ್ ಟೈಮ್ಸ್ ಅನ್ನು “ಸುಪಾರಿ ಮೀಡಿಯಾ” ಎಂದು ಟೀಕಿಸಿದ್ದಾರೆ.

ಇಸ್ರೇಲಿ ಸ್ಪೈವೇರ್ ಪೆಗಾಸಸ್ ಮತ್ತು ಕ್ಷಿಪಣಿಗೆ ಸಂಬಂಧಿಸಿದಂತೆ 2017ರಲ್ಲಿ ಭಾರತ ಮತ್ತು ಇಸ್ರೇಲ್ ನಡುವೆ ಒಪ್ಪಂದವಾಗಿತ್ತು. ಸುಮಾರು 2 ಶತಕೋಟಿ ಅಮೆರಿಕನ್ ಡಾಲರ್ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಕುರಿತಂತೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿಯಲ್ಲಿ ತಿಳಿಸಲಾಗಿದೆ.

BIG NEWS: ಫೆ. 1 ರಿಂದ ಹೊಸ ರೂಲ್ಸ್; ಪರಿಣಾಮ ಬೀರುವ ಕೆಲವು ಬ್ಯಾಂಕಿಂಗ್ ಹೊಸ ನಿಯಮದ ಬಗ್ಗೆ ಇಲ್ಲಿದೆ ಮಾಹಿತಿ

ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಕೆಲವು ಸರ್ಕಾರಗಳು ತನ್ನ ಪೆಗಾಸಸ್ ಸಾಫ್ಟ್‌ವೇರ್ ಅನ್ನು ಬಳಸುತ್ತವೆ ಎಂಬ ಮಾಹಿತಿ ದೊಡ್ಡ ಸಂಚಲನ ಸೃಷ್ಟಿಸಿತ್ತು.

ನ್ಯೂಯಾರ್ಕ್ ಟೈಮ್ಸ್ ವರದಿಗೆ ಪ್ರತಿಕ್ರಿಯಿಸಿರುವ ಸಿಂಗ್, “ನೀವು ನ್ಯೂಯಾರ್ಕ್ ಟೈಮ್ಸ್ ಅನ್ನು ನಂಬಬಹುದೇ? ಅವರನ್ನು “ಸುಪಾರಿ ಮೀಡಿಯಾ” ಎಂದು ಕರೆಯಲಾಗುತ್ತದೆ ಎಂದಿದ್ದಾರೆ. ಸಿಂಗ್ ಅವರು ಭಾರತೀಯ ಸೇನಾ ಮಾಜಿ ಮುಖ್ಯಸ್ಥರೂ ಆಗಿದ್ದವರು ಎಂಬುದು ಗಮನಾರ್ಹ ಸಂಗತಿ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...