BREAKING NEWS : ಸರ್ಕಾರಿ ನೌಕರರ ‘ಸಾರ್ವತ್ರಿಕ ವರ್ಗಾವಣೆ ಅವಧಿ’ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆಯನ್ನು ಮಾಡಿದ್ದು, ಈ ಮೂಲಕ ವರ್ಗಾವಣೆಗೆ ಅಧಿಕಾರಿಗಳಿಗೆ ಅನುಕೂಲ ಆಗಲಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 15.06.2023ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಮುಂದುವರೆದು, ಮೇಲೆ (2)ರಲ್ಲಿ ಓದಲಾದ ದಿನಾಂಕ: 16.06.2023ರ ಸರ್ಕಾರಿ ಆದೇಶದಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ದಿನಾಂಕ: 30.06.2023ರವರೆಗೆ ವಿಸ್ತರಿಸಿ ಆದೇಶಿಸಲಾಗಿರುತ್ತದೆ . ಮುಂದುವರೆದು, ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ: 03.07.2023 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಮೊದಲು ಜೂನ್ 1 ರಿಂದ 15 ರವರೆಗೆ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿತ್ತು. ಇದಾದ ನಂತರ ಸಾರ್ವತ್ರಿಕ ವರ್ಗಾವಣೆ ಅವಧಿಯಲ್ಲಿ ಜೂ.30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ವಿಸ್ತರಣೆ ಮಾಡಿರುವ ಸರ್ಕಾರ ಜು.3ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read