alex Certify ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ 3,600 ಕೋಟಿ ರೂ ಬಿಡುಗಡೆ; ರಾಜ್ಯದ ಯಾವ ವಿವಿಗೆ ಎಷ್ಟು ಹಣ ಬಿಡುಗಡೆ? ; ಪ್ರಹ್ಲಾದ್ ಜೋಶಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ 3,600 ಕೋಟಿ ರೂ ಬಿಡುಗಡೆ; ರಾಜ್ಯದ ಯಾವ ವಿವಿಗೆ ಎಷ್ಟು ಹಣ ಬಿಡುಗಡೆ? ; ಪ್ರಹ್ಲಾದ್ ಜೋಶಿ ಮಾಹಿತಿ

ಬೆಳಗಾವಿ: ದೇಶದ ಅನೇಕ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧ ವಿಶ್ವ ವಿದ್ಯಾಲಯಗಳಿಗಾಗಿ 3,600 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಈ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದರು ಸಚಿವ ಜೋಶಿ.

ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯ. ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಈ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...