alex Certify ಶುಭ ಸುದ್ದಿ: 2200 ಬೋಧಕರು, ಸಾವಿರಾರು ಬೋಧಕೇತರ ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 2200 ಬೋಧಕರು, ಸಾವಿರಾರು ಬೋಧಕೇತರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ 2200 ಬೋಧಕರು ಹಾಗೂ ಸಾವಿರಾರು ಬೋಧಕೇತರ ಹುದ್ದೆಗಳಿಗೆ ಶೀಘ್ರದಲ್ಲಿಯೇ ನೇಮಕಾತಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ನೇಮಕಾತಿ ಪ್ರಾಧಿಕಾರದ ಮೂಲಕ ವಿವಿಗಳಲ್ಲಿ ಖಾಲಿ ಇರುವ 2200 ಬೋಧಕರ ಹುದ್ದೆಗಳು ಹಾಗೂ ಸಾವಿರಾರು ಬೋಧಕೇತರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರಾಧಿಕಾರ ನೇಮಕ ಪ್ರಕ್ರಿಯೆ ನಡೆಸಿ ಅರ್ಹತಾ ಪಟ್ಟಿಯನ್ನು ವಿವಿಗೆ ನೀಡಲಿದೆ. ಇವೆಲ್ಲವೂ ಮಂಜೂರಾದ ಹುದ್ದೆಗಳಾಗಿವೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...