alex Certify ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

  • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
  • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
  • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
  • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
  • ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
  • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
  • ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
  • ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
  • ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
  • ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

      ರಾಜ್ಯವ್ಯಾಪಿ ಅನ್ವಯವಾಗುವಂತೆ:

  • ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
  • ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...