ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಉತ್ತರಪ್ರದೇಶದ ಮುಜಾಫರ್ ನಗರ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗಮನಾರ್ಹ ಅಂಶವೆಂದರೆ ಈ ಪ್ರಕರಣದಲ್ಲಿ ದೂರು ದಾಖಲಾಗಿ 32 ವರ್ಷಗಳ ನಂತರ ಕೋರ್ಟ್ ತೀರ್ಪು ನೀಡಿದೆ.
ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಕುಮಾರ್ ಅವರು ಆರೋಪಿ ಹಾಲು ಮಾರಾಟಗಾರ ಹರ್ಬೀರ್ ಸಿಂಗ್ ಅವರನ್ನು ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿ 5,000 ರೂ. ದಂಡ ವಿಧಿಸಿದ್ದಾರೆ.
ಹರ್ಬೀರ್ ಸಿಂಗ್ ಕಲಬೆರಕೆ ಹಾಲು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ ಎಂದು ಪ್ರಾಸಿಕ್ಯೂಷನ್ ಅಧಿಕಾರಿ ರಾಮಾವತಾರ್ ಸಿಂಗ್ ತಿಳಿಸಿದ್ದಾರೆ. ಅವರು ಮಾರಾಟ ಮಾಡಿದ ಹಾಲಿನ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಕಲಬೆರಕೆ ಕಂಡುಬಂದಿದೆ ಎಂದು ಪ್ರಾಸಿಕ್ಯೂಷನ್ ಅಧಿಕಾರಿ ತಿಳಿಸಿದ್ದಾರೆ.
ಆಹಾರ ನಿರೀಕ್ಷಕ ಸುರೇಶ್ ಚಂದ್ ಅವರು ಹಾಲು ಮಾರಾಟಗಾರರ ವಿರುದ್ಧ ಏಪ್ರಿಲ್ 21, 1990 ರಂದು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.