
ಲಖನೌ: ಹರ ಹರ ಶಂಭೋ ಹಾಡನ್ನು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಸಹೋದರ ಸಂಬಂಧಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
18 ವರ್ಷದ ಖುರ್ಷಿದ್ ಹತ್ಯೆಯಾದ ಯುವಕ. ಮುಜಾಫರ್ ನಗರದ ಮೊಹಮ್ಮದ್ ಪುರ ಮಾಫಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖುರ್ಷಿದ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಆಗುತ್ತಿದ್ದಾಗ ದುಷ್ಕರ್ಮಿಗಳು ಆತನ ಮೇಲೆ ದಾಳಿ ನಡೆಸಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಖುರ್ಷಿದ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ರತನಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.