ಭದೋಹಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ವಾಟ್ಸಾಪ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ವಾಟ್ಸಾಪ್ ಗ್ರೂಪ್ ಅಡ್ಮಿನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಗರ ಪಾಲಿಕಾ ಪರಿಷತ್ ಭದೋಹಿ ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಮುಸ್ಲಿಂ ಅನ್ಸಾರಿ ಎಂಬಾತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಿತ ಕಮೆಂಟ್ ಹಾಕಿದ್ದ. ಹೀಗಾಗಿ ಗ್ರೂಪ್ ಅಡ್ಮಿನ್ ಸಹಾಬುದ್ದೀನ್ ಅನ್ಸಾರಿಯನ್ನು ಬಂಧಿಸಲಾಗಿದೆ. ಕಮೆಂಟ್ ಹಾಕಿದ್ದ ಮುಸ್ಲಿಂ ಅನ್ಸಾರಿ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.