
ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿಧವೆಯಾಗಿರುವ 60 ವರ್ಷದ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದ 36 ವರ್ಷದ ಕಾಮುಕ ಪತ್ನಿಯಂತೆ ತನ್ನೊಂದಿಗೆ ಬಾಳಲು ತಾಯಿಗೆ ಪೀಡಿಸುತ್ತಿದ್ದ. 2023ರ ಜನವರಿ 16ರಂದು ತಾಯಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧದ ಆರೋಪಗಳು ಸಾಬೀತಾಗಿವೆ.
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಬುಲಂದ್ ಶಹರ್ ತ್ವರಿತ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ. ಆಪಾದಿತ ಪುತ್ರನಿಗೆ ಜೀವಾವಧಿ ಶಿಕ್ಷೆ, 51 ಸಾವಿರ ರೂ. ದಂಡ ವಿಧಿಸಲಾಗಿದೆ.