
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಕಾನೂನುಕ್ರಮದ ಭಯವಿಲ್ಲದೇ ಕಿಡಿಗೇಡಿಗಳು ಇಂತಹ ಕೃತ್ಯವೆಸಗಿದ್ದಾರೆ.
ಗಾಜಿಯಾಬಾದ್ನ ಮುರಾದ್ನಗರದ ಖುರ್ರಂಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮಹಿಳೆ ತನ್ನ ಹೆಗಲ ಮೇಲೆ ಮಗುವನ್ನು ಹೊತ್ತುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಾಲ್ವರು ಯುವಕರು ಒಂದೇ ಬೈಕ್ನಲ್ಲಿ ಇನ್ನೊಂದು ದಿಕ್ಕಿನಿಂದ ಮಗುವನ್ನು ಹೊತ್ತ ಮಹಿಳೆಯ ಬಳಿ ಬರುತ್ತಿರುವಾಗ ಬೈಕ್ ನಲ್ಲಿ ಕೊನೆಯದಾಗಿ ಕುಳಿತ ವ್ಯಕ್ತಿ ಮಹಿಳೆಯತ್ತ ಕೈ ಚಾಚಿ ಅನುಚಿತವಾಗಿ ಸ್ಪರ್ಶಿಸಿದ್ದಾನೆ.
ಬೈಕ್ ಸವಾರನು ವೇಗವಾಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.