alex Certify ನದಿಯಲ್ಲಿ ಮುಳುಗಿ 5 ಭಕ್ತರು ಸಾವು: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿಯಲ್ಲಿ ಮುಳುಗಿ 5 ಭಕ್ತರು ಸಾವು: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದುರಂತ

ರಾಜಸ್ಥಾನದ ಧೋಲ್ ಪುರದಲ್ಲಿ ಶುಕ್ರವಾರ ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ಉತ್ತರ ಪ್ರದೇಶದ ಆಗ್ರಾ ಮೂಲದ 5 ಜನರು ಪಾರ್ವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ದಸರಾ ಸಂದರ್ಭದಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು 5 ಜನರು ರಾಜಸ್ಥಾನದ ಧೋಲ್ಪುರ್‌ಗೆ ಬಂದಾಗ ಈ ಘಟನೆ ನಡೆದಿದೆ ಎಂದು ಆಗ್ರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಮುನಿರಾಜ್ ಹೇಳಿದ್ದಾರೆ.

ಸಂತ್ರಸ್ತರು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಭಾವನಪುರ ಗ್ರಾಮದ ನಿವಾಸಿಗಳು ಎಂದು ಮುನಿರಾಜ್ ಹೇಳಿದ್ದು,  ಸಂತ್ರಸ್ತರ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...